ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕೆ ಇಳಿದಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ ನಡೆಸಿದರು. ರೋಡ್ ಶೋಗೆ ರಾಹುಲ್ ಗಾಂಧಿ ಸಾಥ್ ನೀಡಿದರು. ಬಳಿಕ ವಯನಾಡ್ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ಈ ವೇಳೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.