ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು ಯಾವುದೇ ಬ್ಲಾಕ್ ಮೇಲ್ ಗೆ ಹೆದರುವುದಿಲ್ಲ, ಏನು ಮಾಡಬೇಕೋ ಮಾಡುತ್ತಿದ್ದೇವೆ. ಡಿಸಿಎ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಗುತ್ತಿಗೆದಾರ ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ, ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನ. 27 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು.