alex Certify ಇಷ್ಟು ವರ್ಷ ಹಿಂದೂಗಳನ್ನು, ದೇವಸ್ಥಾನಗಳನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಷ್ಟು ವರ್ಷ ಹಿಂದೂಗಳನ್ನು, ದೇವಸ್ಥಾನಗಳನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬೆಂಗಳೂರು : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ- 2024 ಮಂಡನೆಗೆ ರಾಜ್ಯ ಬಿಜೆಪಿ ಟೀಕಿಸಿದೆ. ರಾಜ್ಯದಲ್ಲಿ ಸರಣೀ ರೂಪದಲ್ಲಿ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೂ ವಕ್ರ ದೃಷ್ಟಿ ಬೀರಿ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದು ಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಸಚಿವ ರಾಮಲಿಂಗಾ ರೆಡ್ಡಿ ನೀವು ರಾಜಕೀಯ ಲಾಭಕ್ಕಾಗಿ ಕೇವಲ ಹಿಂದೂ ವಿರೋಧಿ ಧೋರಣೆ ಎಂದು ನಮ್ಮ ಸರ್ಕಾರವನ್ನು ದೂರುತ್ತಿದ್ದೀರಿ. ಒರಿಜಿನಲ್ ಹಿಂದೂಗಳು ನಾವು.. ಇಷ್ಟು ವರ್ಷ ದೇವಸ್ಥಾನಗಳನ್ನು, ಹಿಂದುಗಳನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಸರ್ಕಾರಗಳೇ ಎಂದು ಟಾಂಗ್ ನೀಡಿದ್ದಾರೆ.

ನೀವು ರಾಜಕೀಯ ಲಾಭಕ್ಕಾಗಿ ಕೇವಲ ಹಿಂದೂ ವಿರೋಧಿ ಧೋರಣೆ ಎಂದು ನಮ್ಮ ಸರ್ಕಾರವನ್ನು ದೂರುತ್ತಿದ್ದೀರಿ. ಒರಿಜಿನಲ್ ಹಿಂದೂಗಳು ನಾವು.. ಇಷ್ಟು ವರ್ಷ ದೇವಸ್ಥಾನಗಳನ್ನು, ಹಿಂದುಗಳನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಸರ್ಕಾರಗಳೇ. ನಮ್ಮ ಸರ್ಕಾರವು ಯಾವ ಧರ್ಮದ ಮೇಲು ವಕ್ರ ದೃಷ್ಟಿ ಬೀರುವುದಿಲ್ಲ, ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ಬಾಳುವುದೇ ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ. ನೀವು ಹೇಳುತ್ತಿರುವುದು ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯ ಮೇಲೆ ವಕ್ರದೃಷ್ಟಿ ಕಾಂಗ್ರೆಸ್ ಸರಕಾರ ಬೀರಿದೆ ಅಂತ 2008 ರಿಂದ 2013, 2019 ರಿಂದ 2023ರ ವರೆಗೂ ನಿಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು ಆಗ ಕೂಡ ಈ ವಿದೇಯಕ ಅನುಷ್ಠಾನದಲ್ಲಿತ್ತು ಆಗ ಕೂಡ ನಿಮ್ಮ ಸರ್ಕಾರವು ಹಿಂದುಗಳ ಮೇಲೆ ವಕ್ರ ಕಣ್ಣು ಬೀರಿ ಆದಾಯ ಮಾಡಿಕೊಂಡಿದ್ದೀರಾ? ಆಗ ಕೂಡ ನಿಮ್ಮ ಆಡಳಿತದಲ್ಲಿ ದರಿದ್ರ ತನವಿತ್ತೆ? ಏಕೆಂದರೆ ಈ ವಿದಾಯಕ 2001 ರಿಂದ ಜಾರಿಯಲ್ಲಿದೆ. ಯಾವ ಧರ್ಮದ ಆದಾಯದ ಮೇಲು ನಮ್ಮ ಕಾಂಗ್ರೆಸ್ ಸರ್ಕಾರದ ಕಣ್ಣು ಬೀಳುವುದಿಲ್ಲ ಎಲ್ಲರೂ ಒಗ್ಗಟ್ಟಾಗಿ ಸಂತೋಷದಿಂದ ಬಾಳುವುದೇ ಕಾಂಗ್ರೆಸ್ ಸರ್ಕಾರದ ಗುರಿ. ನೀವು ಎರಡು ಬಾರಿ ಆಡಳಿತದಲ್ಲಿದ್ದಾರಲ್ಲ ಆಗ ಕೂಡ ಭಕ್ತರ ಹಣದಲ್ಲಿ ಬಿಜೆಪಿ ಸರ್ಕಾರ ಪಾಲು ಕಸಿಯುವ ಕೆಲಸ ಮಾಡಿತ? ನಿಮ್ಮ ಸುಳ್ಳು ಮೋಸದ ಪ್ರಚಾರವನ್ನು ರಾಜ್ಯದ ಜನತೆ ನಂಬುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...