ಬೆಂಗಳೂರು: ಮುಡಾ ಪ್ರಕರಣದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೆಲ್ಲರೂ ಒಮ್ಮತದ ಬೆಂಬಲ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ ಶಾಸಕರು ಧೈರ್ಯದ ಮಾತುಗಳನ್ನಾಡಿದ್ದಾರೆ. ನಿಮ್ಮೊಂದಿಗೆ ಇರುತ್ತೇವೆ ಎಂದು ಶಾಸಕರು, ಸಚಿವರು ಹೇಳಿದ್ದು, ಒಕ್ಕೊರಲ ಬೆಂಬಲ ನೀಡಿದ ಸಚಿವರು, ಶಾಸಕರಿಗೆ ಸಿಎಂ ಧನ್ಯವಾದ ಹೇಳಿದ್ದಾರೆ. ನನ್ನ ಪರ ಹೋರಾಡುತ್ತಿದ್ದೀರಿ ನಿಮಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.