alex Certify BIG NEWS: ಜಾತಿ ಗಣತಿ ವರದಿ ಬಹಿರಂಗ ತಡೆಗೆ ಸುಪ್ರೀಂ ಕೋರ್ಟ್ ನಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿ ಗಣತಿ ವರದಿ ಬಹಿರಂಗ ತಡೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ನಾವು ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾತಿ-ಸಮೀಕ್ಷಾ ದತ್ತಾಂಶದ ಮೇಲೆ ಕಾರ್ಯನಿರ್ವಹಿಸದಂತೆ ಬಿಹಾರ ಸರ್ಕಾರವನ್ನು ತಡೆಯಲು ನಿರಾಕರಿಸಿದೆ.

ಬಿಹಾರ ಸರ್ಕಾರದಿಂದ ಜಾತಿ ಗಣತಿ ವರದಿ ಮಾಹಿತಿ ಬಹಿರಂಗಪಡಿಸಿರುವುದರ ಔಚಿತ್ಯವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಆದರೆ, ವರದಿಯ ಇನ್ನಷ್ಟು ದತ್ತಾಂಶಗಳನ್ನು ಪ್ರಕಟಣೆ ಮಾಡಿದಂತೆ ಬಿಹಾರ ಸರ್ಕಾರಕ್ಕೆ ತಡೆ ನೀಡಲು ನಿರಾಕರಿಸಿದೆ.

ಬಿಹಾರದಲ್ಲಿ ಜಾತಿಗಣತಿ ನಡೆಸಲು ಅನುಮತಿ ನೀಡಿದ್ದ ಪಾಟ್ನಾ ಹೈಕೋರ್ಟ್ ನ ಆಗಸ್ಟ್ 1ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಎನ್. ಭಟ್ಟಿ ಅವರ ದ್ವಿಸದಸ್ಯ ಪೀಠದಲ್ಲಿ ನಡೆದಿದೆ.

ಈ ವಿಚಾರದಲ್ಲಿ ನೀತಿ ನಿರ್ಧಾರ ಕೈಗೊಳ್ಳದಂತೆ ಯಾವುದೇ ರಾಜ್ಯಕ್ಕೆ ನಿರ್ದೇಶನ ನೀಡುವ ಇಲ್ಲವೇ ಅದರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ನ್ಯಾಯಾಲಯಕ್ಕೆ ಇಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು 2024ರ ಜನವರಿಗೆ ಮುಂದೂಡಿದೆ.

ಈ ಸಂದರ್ಭದಲ್ಲಿ ನಾವು ಯಾವುದಕ್ಕೂ ತಡೆ ನೀಡುವುದಿಲ್ಲ. ರಾಜ್ಯ ಸರ್ಕಾರದ ನೀತಿ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಜಾತಿ ಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆಯೇ ಎಂಬುದಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...