alex Certify BIG NEWS : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಂದುವರೆದು ಮಾತನಾಡಿದ ಅವರು ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...