ಬೆಂಗಳೂರು : ಸ್ಪೀಕರ್ ಪೀಠಕ್ಕೆ ಯು.ಟಿ. ಖಾದರ್ ಅಗೌರವ ತೋರಿದ್ದಾರೆ. ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೇವು ಎಂದರು.
ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.