ಬೆಂಗಳೂರು : ‘ ಕಾಪಿರೈಟ್’ ವಿಚಾರವಾಗಿ ನಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ನಟ ರಕ್ಷಿತ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
‘ಕಾಪಿರೈಟ್’ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಈ ಸಂಬಂಧ ನಟ ರಕ್ಷಿತ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಕಾಪಿರೈಟ್’ ವಿಚಾರವಾಗಿ ನಮಗೆ ಯಾವುದೇ ನೋಟಿಸ್ ಬಂದಿಲ್ಲ, ಬಂದ ಮೇಲೆ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ನ್ಯಾಯ ಎಲ್ಲಿದೆ ಮತ್ತು ಗಾಳಿಮಾತು ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಟೈಟಲ್ ಸಾಂಗ್ ಹಾಗೂ ಗಾಳಿಮಾತು ಚಿತ್ರದ ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಚಿತ್ರದ ಹಾಡುಗಳನ್ನು ಕದ್ದಿರುವ ಆರೋಪ ಕೇಳಿಬಂದಿದೆ.