ಹಾಸನ : 2028 ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ನಡೆದ ಜನಕಲ್ಯಾಣ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ಈಗಾಗಲೇ ಕಾಂಗ್ರೆಸ್ 5 ಗ್ಯಾರೆಂಟಿಗಳನ್ನು ನೀಡಿ ಮಾತು ಉಳಿಸಿಕೊಂಡಿದೆ. ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಕೊಟ್ಟು ಭಾಗ್ಯಗಳ ಸರ್ಧಾರ ಆಗಿದ್ದಾರೆ. ಸಿದ್ದರಾಮಯ್ಯ ಜೊತೆ ಈ ಬಂಡೆ ಇರಲಿದೆ. ಸಾಯುವವರೆಗೂ ಸಿದ್ದರಾಮಯ್ಯ ಜೊತೆ ಈ ಬಂಡೆ ಇರಲಿದೆ. ಮುಂದೆ ಹಾಸನ ಜಿಲ್ಲೆಯಲ್ಲೂ ನಾವೆ ಗೆಲ್ಲುತ್ತೇವೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದರು.
ಉಪಚುನಾವಣೆಯಲ್ಲಿ ನೀವು ತಕ್ಕ ಉತ್ತರ ಕೊಟ್ಟಿದ್ದೀರಿ. 2028 ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ತಲೆಕೆಡಿಸಿಕೊಳ್ಳಬೇಡಿ ಈ ಬಂಡೆ ಸಿದ್ದರಾಮಯ್ಯ ಜೊತೆ ಸಾಯುವವರೆಗೂ ಇರಲಿದೆ ಎಂದರು.