
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. ವಿಪಕ್ಷಗಳು ನಮ್ಮ ಗ್ಯಾರಂಟಿಗಳನ್ನು ನೋಡಿ ಸಲಹೆಗಳನ್ನು ಕೊಡ್ತಿದ್ದಾರೆ. ವಿಪಕ್ಷಗಳ ಸಲಹೆಗಳನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಅವಧಿಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಲಿದೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಬಜೆಟ್ ಮೇಲೆ ರಾಜ್ಯ ಜನರ ನಿರೀಕ್ಷೆ ಹೆಚ್ಚಾಗಿದೆ.
ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲೆ ರಾಜ್ಯದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇವುಗಳನ್ನೆಲ್ಲಾ ಗಮನದಲ್ಲಿ ಇರಿಸಿಕೊಂಡು, ಮುಂದಿನ ಚುನಾವಣೆಗೂ ಅನುಕೂಲವಾಗುವಂತೆ, ಶ್ರೀಸಾಮಾನ್ಯನಿಗೆ ಹೊರೆಯಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರಾ ಎಂಬ ಪ್ರಶ್ನೆಗೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಗಲಿದೆ.