alex Certify ತುಮಕೂರು ಜಿಲ್ಲೆಯನ್ನು ಎರಡನೇ ‘ಬೆಂಗಳೂರು’ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಶಪಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರು ಜಿಲ್ಲೆಯನ್ನು ಎರಡನೇ ‘ಬೆಂಗಳೂರು’ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಶಪಥ

ತುಮಕೂರು : ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳೊಂದಿಗೆ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರಿನಂತೆ ತುಮಕೂರು ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 658 ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ್ದೇವೆ. ಈ ಭಾಗದಲ್ಲಿ ಹೆಚ್ಚು ಉದ್ಯೋಗ ಸೃಷ್ಠಿಸುವುದು ನಮ್ಮ ಸಂಕಲ್ಪವಾಗಿದೆ. ನಮ್ಮ ಗ್ಯಾರಂಟಿಗಳು ರಾಜ್ಯದ ಜನರ ಮನಗೆದ್ದಿದ್ದು, ಅವರ ಆರ್ಥಿಕ ಹೊರೆಯನ್ನು ಇಳಿಸಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ನೀಡುತ್ತಿರುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದೇ ನಮ್ಮ ಗುರಿ ಎಂದು ತಿಳಿಸಿದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...