collegeಬೆಂಗಳೂರು : ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.
ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯ ಕಾರಣಕ್ಕಾಗಿ ಅನಾವಶ್ಯಕ ಗೊಂದಲ ನಿರ್ಮಾಣವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಮುಂದೆ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ.ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.