ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.
ಸಿಇಟಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಆರ್‌ಡಿ ಸಂಖ್ಯೆ ಇತರೆ ಕ್ಲೇಮುಗಳನ್ನು ತಪ್ಪಾಗಿ ನಮೂದಿಸಿದ ವಿದ್ಯಾರ್ಥಿಗಳು ಸರಿಯಾಗಿ ತಿದ್ದುಪಡಿ ಮಾಡಲು ಮೇ 9 ರಿಂದ 15 ರವರೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, ಅರ್ಜಿ ತಿದ್ದುಪಡಿ ಬಗ್ಗೆ ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ https://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.