alex Certify BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

ಬೆಂಗಳೂರು: ಮದುವೆ ದಿಬ್ಬಣದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಬಳಿ ಸಂಭವಿಸಿದೆ.

ಮದುವೆ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದಾಗ ಬಸ್, ಚಾಲಕನ ನಿಯಂತ್ರಣ ತಪ್ಪಿ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತಪ್ಪಿಸಿಕೊಳ್ಳಲೆಂದು ಚಾಲಕ ಬಸ್ ನ್ನು ಇನ್ನಷ್ಟು ವೇಗವಾಗಿ ಚಲಾಯಿಸಿದ್ದು, ವಿದ್ಯುತ್ ಕಂಬಕ್ಕೆ ಗುದ್ದಿದ್ದು, ಗುದ್ದಿದ ರಭಸಕ್ಕೆ ಬಸ್ ಪಲ್ಟಿಯಾಗಿ ಬಿದ್ದಿದೆ.

ಬಸ್ ನಲ್ಲಿದ್ದ ಹನುಮಕ್ಕ (65), ಲಕ್ಷ್ಮಿದೇವಮ್ಮ (55) ಹನುಮಯ್ಯ (71) ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...