ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಜೀವನ ಕಥನ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ನಲ್ಲಿ ಪ್ರಸಾರವಾಗಲಿದೆ. ಅನೇಕ ದಿನಗಳಿಂದ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಅವರನ್ನು ಕರೆ ತರಲು ಪ್ರಯತ್ನ ನಡೆಸಲಾಗಿತ್ತು. ಈಗ ಕಾರ್ಯಕ್ರಮಕ್ಕೆ ಬರಲು ಅವರು ಒಪ್ಪಿಕೊಂಡಿದ್ದು, ಶೀಘ್ರವೇ ಚಿತ್ರೀಕರಣ ನಡೆಸಲಾಗುವುದು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟ, ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಈ ವಾರಾಂತ್ಯ ಇಲ್ಲವೇ ಮುಂದಿನ ವಾರ ಡಿ.ಕೆ. ಶಿವಕುಮಾರ್ ಭಾಗವಹಿಸಲಿರುವ ಸಂಚಿಕೆ ಪ್ರಸಾರವಾಗುವ ಸಾಧ್ಯತೆ ಇದೆ.