alex Certify ʻWEFʼ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಒಡಂಬಡಿಕೆ : 23,000 ಕೋಟಿ ರೂ.ಗಳ ಹೂಡಿಕೆ : ಸಚಿವ ಎಂ.ಬಿ.ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻWEFʼ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಒಡಂಬಡಿಕೆ :  23,000 ಕೋಟಿ ರೂ.ಗಳ ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಕರ್ನಾಟಕ ಸರ್ಕಾರ 23,000 ಕೋಟಿ ರೂ.ಗಳ ಎಂಟು ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬುಧವಾರ ತಿಳಿಸಿದ್ದಾರೆ.‌

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಕಂಪನಿಗಳ ಜೊತೆಗೆ 23,000 ಕೋಟಿ ರೂ.ಮೊತ್ತದ 8 ಒಪ್ಪಂದಗಳಿಗೆ (ಎಂಒಯು) ರಾಜ್ಯ ಸರ್ಕಾರವು ಸಹಿ ಹಾಕಿದೆ, ಬೆಂಗಳೂರಿನಲ್ಲಿ 100 ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವಕ್ಸ್ 20,000 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದ್ದು, 1000 ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.

ದಾವೋಸ್‌ ಪ್ರವಾಸದ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರ ಸುದ್ದಿಗೋಷ್ಠಿಯ ಪ್ರಮುಖಾಂಶಗಳು ಹೀಗಿವೆ.

ವಿಜಯಪುರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿ ಗುರಿಗೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಿಜಯಪುರದಲ್ಲಿ ರೂ. 300 ಕೋಟಿ ರೂ.ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ.

ವಿಜಯಪುರದಲ್ಲಿ ಬಿಎಲ್ ಅಟ್ರೊ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ.

ಹೆಚ್ ಪಿ ಎಂಟರ್ ಪ್ರೈಸಸ್, ಹೆಚ್ ಸಿ ಎಲ್, ವೋಲೊ ಗ್ರೂಪ್, ಸಿಸ್ಕೊ, ಸೋನಿ, ಎಬಿ ಇನ್ ಬೇವ್, ಹೀಗೆ ಹಲವು ಕಂಪೆನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...