ಬೆಂಗಳೂರು: ಊರಿನ ಮಧ್ಯಭಾಗದಲ್ಲಿರುವ ಎಂಎಸ್ಐಎಲ್ ಮದ್ಯ ಮಳಿಗೆಗಳಿಂದ ಜನರಿಗೆ ತೊಂದರೆಯಾಗುತ್ತಿದ್ದು, ಅವುಗಳನ್ನು ಸ್ಥಳಾಂತರ ಮಾಡುವಂತೆ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.
ವಿಧಾನಸಭೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ನೇತೃತ್ವದ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಗುರುವಾರ ವಿಧಾನಸಭೆಯಲ್ಲಿ ಎರಡನೇ ವರದಿ ಸಲ್ಲಿಸಿದೆ. ಆಂಧ್ರಪ್ರದೇಶ, ತೆಲಂಗಾಣ ಗಡಿಯಲ್ಲಿ ಜನ ಸೇಂದಿ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಂತಹ ಕಡೆಗಳಲ್ಲಿ ಎಂಎಸ್ಐಎಲ್ ಮಳಿಗೆಗಳನ್ನು ಆರಂಭಿಸಬೇಕೆಂದು ಹೇಳಲಾಗಿದೆ.
ಎಂಎಸ್ಐಎಲ್ ಸಂಸ್ಥೆಯಡಿ ಪರಿಶಿಷ್ಟ ಜಾತಿ ಪಂಗಡದವರಿಗೂ ಅವಕಾಶ ಕಲ್ಪಿಸಲು ಎಂ ಪ್ಯಾನಲ್ ಮಾಡಿಸಿಕೊಳ್ಳಲು ಕಡ್ಡಾಯವಾಗಿ ಮೀಸಲಾತಿ ಅಳವಡಿಸಿಕೊಳ್ಳಬೇಕು. ಜನರಿಗೆ ತೊಂದರೆಯಾಗುತ್ತಿರುವುದರಿಂದ ಊರಿನ ಮಧ್ಯಭಾಗದಲ್ಲಿರುವ ಎಂಎಸ್ಎಎಲ್ ಮಳಿಗೆಗಳನ್ನು ಸ್ಥಳಾಂತರ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ.