ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಮಿಡ್ನಾಪುರದ ಕೋಸ್ಸೆ ನದಿಯ ಮೇಲಿನ ರೈಲ್ವೆ ಸೇತುವೆಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗಲೇ ದುರಂತ ಸಂಭವಿಸಿದೆ.
ಲೋಕಲ್ ರೈಲು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ರೈಲ್ವೆ ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲು ಬರುವುದನ್ನು ಗಮನಿಸದೇ ಸೆಲ್ಪಿ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.