alex Certify ಮೇ 5 ರಿಂದ ಮತ್ತೆ ದೀದೀ ಸರ್ಕಾರ: ಹ್ಯಾಟ್ರಿಕ್ ಜಯದೊಂದಿಗೆ ಅಧಿಕಾರಕ್ಕೆ ಬಂದ ಮಮತಾ ಮುಖ್ಯಮಂತ್ರಿಯಾಗಿ ಪ್ರಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 5 ರಿಂದ ಮತ್ತೆ ದೀದೀ ಸರ್ಕಾರ: ಹ್ಯಾಟ್ರಿಕ್ ಜಯದೊಂದಿಗೆ ಅಧಿಕಾರಕ್ಕೆ ಬಂದ ಮಮತಾ ಮುಖ್ಯಮಂತ್ರಿಯಾಗಿ ಪ್ರಮಾಣ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರಕ್ಕೇರಿರುವ ಮಮತಾಬ್ಯಾನರ್ಜಿ ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಶ್ಚಿಮ ಬಂಗಾಳದ 292 ವಿಧಾನಸಭೆ ಕ್ಷೇತ್ರಗಳಲ್ಲಿ 217 ಕ್ಷೇತ್ರಗಳಲ್ಲಿ ಟಿಎಂಸಿ ಭರ್ಜರಿ ಜಯ ಗಳಿಸಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಪರಾಭವಗೊಂಡಿರುವ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...