ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಟಿಎಂಸಿ ಮತ್ತು ಬಿಜೆಪಿ ತಲಾ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡೂ ಪಕ್ಷಗಳಿಗೆ ಆರಂಭಿಕ ಮುನ್ನಡೆ ಸಿಕ್ಕಿದೆ.
ಕಳೆದ ಚುನಾವಣೆಯಲ್ಲಿ ಕೇವಲ 3 ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈ ಬಾರಿ ಬಹುದೊಡ್ಡ ಗೆಲುವಿನ ನಿರೀಕ್ಷೆಯಲ್ಲಿವೆ. ದಶಕಗಳ ಕಾಲ ಬಂಗಾಳದಲ್ಲಿ ಆಡಳಿತ ನಡೆಸಿದ್ದ ಎಡಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಎದುರು ಏಕಾಂಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದ್ದಾರೆ.