
ಕೊಲ್ಕೊತ್ತಾ: ದೇಶದ ಗಮನ ಸೆಳೆದಿದ್ದ ಪಶ್ಚಿಮಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ ಅಂತರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದಾರೆ.
ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಟಿಎಂಸಿ ಅಭ್ಯರ್ಥಿಗಳು 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಎರಡು ಹಾಗೂ ಸಿಪಿಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. 292 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಮುಂದುವರೆದಿದೆ.