ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯದ ನಿವಾಸಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸ್ಥಳೀಯರನ್ನು ಒಕ್ಕಲಿಬ್ಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿದ ನಂತರವೂ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮಾಡುವುದಿಲ್ಲ, ಒಕ್ಕಲಿಬ್ಬಿಸುವುದಿಲ್ಲ, ಯಾವುದೇ ಪರಿಣಾಮವೂ ಉಂಟಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪಶ್ಚಿಮ ಘಟ್ಟ ಪ್ರದೇಶದ ವ್ಯಾಪ್ತಿಯ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಸಂಸದರು ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯಗಳಿಂದ ಸ್ಥಳೀಯರನ್ನು ಒಕ್ಕಲೆಬ್ಬಿಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇರಳ ಸಂಸದ ಮುರಳಿಧರನ್ ಅವರಿಗೆ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ಪತ್ರ ಮುಖೇನ ಸ್ಪಷ್ಟನೆ ನೀಡಿದ್ದಾರೆ.
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯದ ಸಂರಕ್ಷಿತ ಅರಣ್ಯ ಪ್ರದೇಶದ ಸುತ್ತಲಿನ ಬಫರ್ ಜೋನ್ ಅಥವಾ ಸೂಕ್ಷ್ಮ ವಲಯದಲ್ಲಿ ನೆಲೆಸಿದವರನ್ನು ಯಾವುದೇ ಕಾರಣಕ್ಕೂ ಒಕ್ಕಲಿಬ್ಬಿಸುವುದಿಲ್ಲ. ಪರಂಪರಾಗತವಾಗಿ ಈ ಪ್ರದೇಶಗಳಲ್ಲಿ ನಡೆಸಿಕೊಂಡು ಬಂದ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೂ ಅಡ್ಡಿಯಾಗುವುದಿಲ್ಲ. ರಾಜ್ಯ ಸರ್ಕಾರಗಳು ಸಲ್ಲಿಸಿದ ಪ್ರಸ್ತಾವನೆ ಆಧರಿಸಿ ಕೇಂದ್ರ ಸರ್ಕಾರ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಲಿದೆ. ಅಧಿಸೂಚನೆ ನಂತರವೂ ಸ್ಥಳೀಯರನ್ನು ಒಕ್ಕಲಿಬಿಸುವುದು, ಸ್ಥಳಾಂತರಿಸುವುದನ್ನು ಮಾಡುವುದಿಲ್ಲ ಎಂದು ಹೇಳಲಾಗಿದೆ.
ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ವಾಣಿಜ್ಯ ಉದ್ದೇಶದ ಗಣಿಗಾರಿಕೆ, ಕ್ವಾರೆ, ಕ್ರಷಿಂಗ್ ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನು ಸಾಕರಣೆ ಚಟುವಟಿಕೆ ಮುಂದುವರೆಯಲಿವೆ. ಕೆಲವು ನಿರ್ಬಂಧಗಳಿಗೆ ಒಳಪಟ್ಟು ಮೂಲ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗಿದೆ.