
ಇದಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ವಿರಾಟ್ ಕೊಹ್ಲಿ ವೈಯಕ್ತಿಕವಾಗಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಭವಿಷ್ಯದಲ್ಲಿ ಭಾರತ ತಂಡದ ಸಾಧನೆಯನ್ನು ಎತ್ತರಕ್ಕೆ ಒಯ್ಯುವಲ್ಲಿ ಕೊಹ್ಲಿ ಪಾತ್ರ ಹೆಚ್ಚಾಗಿರಲಿದೆ. ಈ ಹಿಂದೆಯೂ ಅವರ ನಾಯಕತ್ವದಲ್ಲಿ ಭಾರತ ತಂಡ ಶ್ರೇಷ್ಠ ಪ್ರದರ್ಶನ ತೋರಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ. ತಮ್ಮ ಉತ್ತಮ ನಾಯಕತ್ವ ಗುಣದಿಂದ ತಂಡ ಸಾಕಷ್ಟು ಸಾಧನೆ ಮಾಡುವಂತೆ ಮಾಡಿದ್ದಾರೆ. ಅವರನ್ನು ಬಿಸಿಸಿಐ ಅಭಿನಂದಿಸುತ್ತದೆ. 68 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿ 40 ಗೆಲುವಿನ ಕಾಣಿಕೆ ನೀಡಿದ್ದು ಶ್ರೇಷ್ಠ ಸಾಧನೆಯೇ ಸರಿ ಎಂದು ಗಂಗೂಲಿ ಬಣ್ಣಿಸಿದ್ದಾರೆ.
ಬರೋಬ್ಬರಿ 7 ವರ್ಷಗಳ ಕಾಲ ಭಾರತ ತಂಡದ ನಾಯಕತ್ವ ವಹಿಸಿದ್ದ ಕೊಹ್ಲಿ, ಈಗ ಎಲ್ಲ ಮಾದರಿಯ ಕ್ರಿಕೆಟ್ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ. ಇದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.