ದಾವಣಗೆರೆ : ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ . ಲ್ಯಾಬ್ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ.
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು.
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಂಸ ಕುರಿಯದೆ ಅಥವಾ ನಾಯಿಯದೆ ಎಂಬುದನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ರಾಜಸ್ಥಾನದಿಂದ 90 ಬಾಕ್ಸ್ ಗಳಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಮಾಂಸ ತರಲಾಗಿದೆ. ಈ ಬಗ್ಗೆ ಅನುಮಾನಗೊಂಡ ಹಿಂದೂ ಪರ ಸಂಘಟನೆಗಳು ದಾಳಿ ನಡೆಸಿದ್ದು, ಈ ಮಾಂಸ ನಾಯಿ ಮಾಂಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.