alex Certify ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಇಂದು 14 ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ ಹೆಚ್ಚಿನ ಒತ್ತು ನೀಡಿದ್ದಾರೆ.

ಶಿಕ್ಷಣ ಇಲಾಖೆಗೆ 37,000 ಕೋಟಿ ಅನುದಾನ ಮೀಸಲು, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ 5,800 ಕೋಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ ಮೀಸಲಿಡಲಾಗಿದೆ.

ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..?

1) ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ
2) `ನವೋದ್ಯಮ’ ಹೊಸ ಯೋಜನೆಯಡಿ ಕೃಷಿ ಉದ್ಯಮಗಳಿಗೆ ನಾವೀನ್ಯತೆಯನ್ನು ಪ್ರೋತ್ಸಾಹಿಸಲು 10 ಕೋಟಿ ರೂ. ನೆರವು,
3) ರೈತ ಉತ್ಪಾದಕ ಸಂಸ್ಥೆಗಳ ಕೃಷಿ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ಗಾಗಿ 10 ಕೋಟಿ ರೂ.
4) ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ಸೌಲಭ್ಯ.
5) ರೈತ ಉತ್ಪಾದಕ ಸಂಸ್ಥೆಗಳು ನಿರ್ಮಿಸುವ ಗೋದಾಮು, ಶೀತಲಗೃಹ ನಿರ್ಮಾಣ ಮತ್ತಿತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ.20 ರಷ್ಟು, 1 ಕೋಟಿ ರೂ. ಮೀರದಂತೆ SEED CAPITAL ಸೌಲಭ್ಯ
6) ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತು ಉತೇಜನಕ್ಕೆ 5 ಕೋಟಿ ರೂ. ನೆರವು
7) ವಾಣಿಜ್ಯ ಹೂವಿನ ರಫ್ತು ಉತ್ತೇಜನ; ವಾಣಿಜ್ಯ ಹೂವಿನ ತಳಿಗಳ ಕೊರತೆ ನಿವಾರಣೆಗೆ ಕ್ರಮ.
8) ಶಿಡ್ಲಘಟ್ಟ ರೇಷ್ಮೆಗೂಡಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲು ಕ್ರಮ.
9) ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
10) ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ,
11) ಚರ್ಮಗಂಟು ರೋಗದಿಂದ ಮರಣ ಹೊಂದಿ ಪರಿಹಾರ ವಿತರಣೆಗೆ ಬಾಕಿ ಇರುವ 5,851 ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನ ವಿತರಿಸಲು ಕ್ರಮ.
12) ನಂದಿನಿ ಹೈನು ಉತ್ಪನ್ನಗಳ ಬ್ರಾಂಡನ್ನು ಇನ್ನಷ್ಟು ವಿಸ್ತರಿಸಿ, ಬೆಳೆಸಲು ಸರ್ಕಾರದ ಆದ್ಯತೆ.
13) ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ ಮೂರು ಲಕ ರೂ. ಗಳಿಗೆ ಹೆಚ್ಚಳ
14) ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ,
15) ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ
16) ಗೋದಾಮು ನಿರ್ಮಿಸಲು 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.7 ರಷ್ಟು ಬಡ್ಡಿ ಸಹಾಯಧನ
17) ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ ಏಳು ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
18) ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ
ಸ್ಥಾಪನೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...