alex Certify BIG NEWS : ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು..?

ರಾಯಚೂರು : ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು.ಸಾಮಾಜಿಕ, ಶೈಕ್ಷಣಿಕ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಪಕ್ಷದ ರಾಜ್ಯ ಮಟ್ಟದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ. ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ.

ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ಧ ವಿರೋಧ ಪಕ್ಷದವರು ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ ದೇವೇಗೌಡರು ಒಬ್ಬರು. ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಮೇಲೆ ಎಫ್.ಐ.ಆರ್ ಆಗಿರುವುದರಿಂದ ಮೊದಲು ಅವರು ರಾಜೀನಾಮೆ ನೀಡಲಿ, ಜಮೀನು ಖರೀದಿ ಹಗರಣದಲ್ಲಿ ಅವರು ಈ ಹಿಂದೆ ಭಾಗಿಯಾಗಿದ್ದರು. ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ. ಗೋಕಾಕ್ ಚಳವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...