ಬೆಂಗಳೂರು : ಪುತ್ರ ಪ್ರಜ್ವಲ್ ವಿರುದ್ಧದ ಪೆನ್ ಡ್ರೈವ್ ಪ್ರಕರಣದ ಕುರಿತು ಮಾಜಿ ಸಚಿವ ಹೆಚ್ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಹೊಳೆನರಸೀಪುರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ವಿಚಾರ ಏನೂ ಗೊತ್ತಿಲ್ಲ, ನಾನು ಯಾರ ಬಗ್ಗೆ ಕೂಡ ಮಾತನಾಡಲ್ಲ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಏನೂ ಹೇಳಲ್ಲ, ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ರೇವಣ್ಣ ನಿನ್ನೆ ಹೊಳೆನರಸೀಪುರದ ತಮ್ಮ ನಿವಾಸಕ್ಕೆ ಆಗಮಿಸಿದ್ದು, ಇಂದು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.