alex Certify ಸಾರಿಗೆ ನೌಕರರ ವೇತನ-ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರ ವೇತನ-ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬೆಂಗಳೂರು : ಸಾರಿಗೆ ನೌಕರರ ವೇತನ ಕುರಿತು ಬಿಜೆಪಿ ಮಾಡಿದ ಟ್ವೀಟ್ ಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ಎರಡು ವಾರಗಳಿಂದ ನಡೆಯುತ್ತಿರೋ ಈ ಟ್ವೀಟ್ ವಾರ್ ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ಬಿಜೆಪಿಗೆ ಮಾನ ಇಲ್ಲ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.ಬಿಜೆಪಿಗೆ ಶಕ್ತಿ ಯೋಜನೆಯಿಂದ ಲಕ್ಷಗಟ್ಟಲೇ ಮಹಿಳೆಯರು ಓಡಾಡೋದು ಸಹಿಸಿಕೊಳ್ಳೋಕೆ ಆಗ್ತಿಲ್ಲ. ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಎಸ್ಆರ್ ಟಿಸಿ ನೌಕರರಿಗೆ ಒಂದನೇ ತಾರೀಖಿಗೆ ಸಂಬಳ ಆಗುತ್ತೆ. ಆಗಸ್ಟ್ 7ರಂದು ಬಿಎಂಟಿಸಿ ನೌಕರರಿಗೆ ಸಂಬಳ ಆಗಿದೆ. ಬಿಜೆಪಿ ಜನರಿಗೆ ತಪ್ಪು ಸಂದೇಶ ನೀಡ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ..! BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ..! KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ..! ಮೂರು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ ಕಂಡಿಲ್ಲ..! ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೂ ಸಂಬಳ ಸಿಕ್ಕಿಲ್ಲ..! ಸರ್ಕಾರಿ ಶಾಲಾ ಶಿಕ್ಷಕರಿಗೂ ತಿಂಗಳಾದರೂ ಖಾತೆಗೆ ಜಮೆ ಆಗದ ಸಂಬಳ..! ಗುತ್ತಿಗೆ ಆಧಾರದ ಸರ್ಕಾರಿ ನೌಕರರಿಗೆ ತಲುಪಿಲ್ಲ ಸಂಬಳ..! ಇನ್ನೂ ಹಲವು ಇಲಾಖೆಗಳ ಸರ್ಕಾರಿ ನೌಕರರು ಸಂಬಳ ಸಿಗದೆ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಸಿದ್ದರಾಮಯ್ಯ ಅವರ ಸರ್ಕಾರ, ಗ್ಯಾರಂಟಿಯ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳವನ್ನು ಜಾರಿಗೊಳಿಸಿ ಸ್ವಾಮಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...