alex Certify ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ 2024 – 25ನೇ ಸಾಲಿನ ಬಜೆಟ್ ಶ್ರೀಸಾಮಾನ್ಯನ ಪರವಾದ, ಆರ್ಥಿಕ ಶಿಸ್ತಿನ ಹಾಗೂ ಕರ್ನಾಟಕವನ್ನು ಮತ್ತೊಮ್ಮೆ ಪ್ರಗತಿಯ ಪಥದಲ್ಲಿ ಮುನ್ನಡೆಸುವ ಬಜೆಟ್ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಘೋಷಣೆಗಳು ಹೀಗಿವೆ

– ₹5,200 ಕೋಟಿ.ವೆಚ್ಚದಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ನಂತೆ ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ಸಂಪರ್ಕ ರಸ್ತೆಗಳ ಅಭಿವೃದ್ಧಿ

– ಕಲ್ಯಾಣ ಪಥ ಯೋಜನೆಯಡಿ ₹1,000 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಒಟ್ಟು 1,150 ಕಿ.ಮೀ. ರಸ್ತೆಗಳ ಅಭಿವೃದ್ಧಿ

– 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಷ್ಟಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಲಾಗುವ 5 ಉಪ ಕ್ರಮಗಳು

– ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ನಿರ್ಧಾರ

– ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿ ಜಾರಿ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಪ್ರಾರಂಭ

– ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸರ್ಕಾರಿ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭ

– ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಜಾರಿ

– ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ
ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು

– 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ ₹25 ಕೋಟಿ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು

– 200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್ ಮಾಡಲಾಗುವುದು.

– ಹಿರಿಯ ನಾಗರಿಕ ಆರೈಕೆ ಮತ್ತು ಚಿಕಿತ್ಸೆಗಾಗಿ ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಆರೈಕೆ-ಉಪಶಮನ ಕೇಂದ್ರಗಳ ಪ್ರಾರಂಭ

– ಸ್ವಸಹಾಯ ಗುಂಪು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು, ಗ್ರಾಮೀಣ ಭಾಗದ ಮುಂಚೂಣಿ ಕಾರ್ಯಕರ್ತೆಯರಿಗೆ ಪ್ರೇರಣಾ ಯೋಜನೆಯಡಿ ಮುಟ್ಟಿನ ಕಪ್ ಬಳಕೆಗೆ ಪ್ರೋತ್ಸಾಹ

– ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ‘ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ’ ಪ್ರಾರಂಭ

– ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ₹1 ಲಕ್ಷ ನೆರವಿನೊಂದಿಗೆ SHG ಗಳ ಸಹಯೋಗದೊಂದಿಗೆ ಎಣ್ಣೆ ಗಾಣ ಸ್ಥಾಪನೆ

– ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಟಿಯಿಂದ ₹132 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ, ಪುಸ್ತಕಗಳು, ಡಿಜಿಟಲ್ ಉಪಕರಣಗಳು ಹಾಗೂ ವಿಶೇಷಚೇತನ ಸ್ನೇಹಿ ಉಪಕರಣಗಳ ಖರೀದಿ
– ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವುದು ಮತ್ತು ಪ್ರತಿ ತಾಲ್ಲೂಕಿಗೆ ಕನಿಷ್ಠ 2 ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ

– ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸುಸ್ಥಿರವಾಗಿ ನಿರ್ವಹಿಸಲು ತ್ಯಾಜ್ಯವನ್ನು ಕಡಿಮೆ ಮಾಡುವ, ಪುನಃ ಬಳಸುವ ಮತ್ತು ಮರಳಿ ಉಪಯೋಗಿಸುವ ತತ್ವಗಳಾಧಾರಿತ ವರ್ತುಲ ಆರ್ಥಿಕತೆ (Circular Economy) ಮಾದರಿಗೆ ಪ್ರಸಕ್ತ ಸಾಲಿನಿಂದ ಪ್ರೋತ್ಸಾಹ

– ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಿ, ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ₹2 ಕೋಟಿ ಒದಗಿಸಲಾಗುವುದು.

– ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು₹ 2,000 ಹೆಚ್ಚಳ

– ⁠ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪ.ಜಾತಿ ಮತ್ತು ಪ.ಪಂಗಡದವರಿಗೆ ದಾಖಲೆಗಳನ್ನು ಡಿಜಿಲಾಕರ್ ಆಪ್ನಲ್ಲಿ ಸುರಕ್ಷಿತವಾಗಿರಿಸಲು ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ 1,000 ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲು ನಿರ್ಧಾರ

– ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಬೇಕಾದ ಅನುದಾನದ ಸೂತ್ರಗಳ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಶಿಫಾರಸ್ಸು ಮಾಡಲು 5ನೇ ರಾಜ್ಯ ಹಣಕಾಸು ಆಯೋಗ ರಚನೆ. ಆಯೋಗದಿಂದ ಸ್ವೀಕೃತವಾಗುವ ಶಿಫಾರಸ್ಸುಗಳನ್ನು ಸರ್ಕಾರವು ಪ್ರಾಮಾಣಿಕವಾಗಿ ಪರಿಶೀಲಿಸಿ, ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...