alex Certify Budget Breaking : ರಾಜ್ಯ ಬಜೆಟ್ ನಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking : ರಾಜ್ಯ ಬಜೆಟ್ ನಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದು, ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಇಂದು ಮಂಡಿಸಿದ ಬಜೆಟ್ ನಲ್ಲಿ ಹಲವು ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬ ಮಾಹಿತಿ ನೋಡುವುದಾದರೆ.

•ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ.
• 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ. ಅನುದಾನ.
ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
• ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
• ಬೆಂಗಳೂರಿನ ನೆಫೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ.
• ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)
• ಡಿಜಿಟಲ್ ಹೆಲ್ತ್ ಸೊಸೈಟಿಯಡಿ Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿ ಒಂದೇ ಮೂಲದಿಂದ ಲಭ್ಯವಾಗುವಂತೆ ಮಾಡಲು ಕ್ರಮ.
•ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...