alex Certify BIG NEWS : ಕೊಲೆ ಕೇಸ್ ನಲ್ಲಿ ದರ್ಶನ್ & ಗ್ಯಾಂಗ್ ಬಂಧನದ ಬಗ್ಗೆ ನಟ ಉಪೇಂದ್ರ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೊಲೆ ಕೇಸ್ ನಲ್ಲಿ ದರ್ಶನ್ & ಗ್ಯಾಂಗ್ ಬಂಧನದ ಬಗ್ಗೆ ನಟ ಉಪೇಂದ್ರ ಹೇಳಿದ್ದೇನು..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನದ ಬಗ್ಗೆ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಉಪೇಂದ್ರ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

ಉಪೇಂದ್ರ ಹೇಳಿದ್ದೇನು..?

ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (

ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ  ಎಂದಿದ್ದಾರೆ.

 

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...