ಭಾರತ ಸರ್ಕಾರವು ಫೆಬ್ರವರಿ 13, 2024 ರಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉದ್ದೇಶ ದೇಶದ ಒಂದು ಕೋಟಿ ಮನೆಗಳಿಗೆ 300 ಉಚಿತ ಯೂನಿಟ್ ವಿದ್ಯುತ್ ಅನ್ನು ಒದಗಿಸುವುದಾಗಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗಾಗಿ ಆನ್‌ಲೈನ್ ಅರ್ಜಿಯನ್ನು ಫೆಬ್ರವರಿ 13, 2024 ರಿಂದ ಪ್ರಾರಂಭಿಸಲಾಗಿದೆ.
ಈ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ 75000 ಕೋಟಿ ರೂಪಾಯಿಗಿಂತಲೂ ಹೆಚ್ಚು ಹೂಡಿಕೆ ಮಾಡಲಾಗುವುದು. ಈ ಯೋಜನೆಯಡಿ ಜನರ ಮನೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದ ಅವರು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ನ ಪ್ರಯೋಜನವನ್ನು ಪಡೆಯುತ್ತಾರೆ.
ಈ ಯೋಜನೆಯ ಮೂಲಕ ಸಬ್ಸಿಡಿ ಮೊತ್ತವನ್ನು ಫಲಾನುಭವಿ ನಾಗರಿಕರ ಬ್ಯಾಂಕ್ ಖಾತೆಗೆ ನೇರವಾಗಿ ಕಳುಹಿಸಲಾಗುವುದು. ಈ ಯೋಜನೆಯು ಜನರಿಗೆ ವಿದ್ಯುತ್ ಬಿಲ್‌ಗಳನ್ನು ಉಳಿಸಲು, ಹೆಚ್ಚಿನ ಆದಾಯವನ್ನು ಗಳಿಸಲು ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ : ಈ ಯೋಜನೆಯ ಪ್ರಯೋಜನವನ್ನು ಭಾರತೀಯ ನಾಗರಿಕರು ಮಾತ್ರ ಪಡೆಯುತ್ತಾರೆ. ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ ಹಾಗೂ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿ ಇರಬಾರದು. ಅರ್ಜಿ ಸಲ್ಲಿಸುವ ವ್ಯಕ್ತಿಯ ಕುಟುಂಬದ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿ ಮೀರಬಾರದು. ಎಲ್ಲಾ ಜಾತಿಗಳ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ಸೌರ ಯೋಜನೆಯಡಿ, ಸೌರ ಫಲಕಗಳನ್ನು ಸ್ಥಾಪಿಸಲು ಸರ್ಕಾರವು ಈ ಕೆಳಗಿನ ಸಬ್ಸಿಡಿಗಳನ್ನು ಒದಗಿಸುತ್ತದೆ:
2 kW ವರೆಗೆ ಪ್ರತಿ kW ಗೆ 30,000 ರೂಪಾಯಿ
3 kW ಗಿಂತ ದೊಡ್ಡದಾದ ವ್ಯವಸ್ಥೆಗಳಿಗೆ ಒಟ್ಟು ಸಬ್ಸಿಡಿ ಗರಿಷ್ಠ 78,000 ರೂಪಾಯಿ.
ಈ ಯೋಜನೆ ಲಾಭ ಪಡೆಯಲು ಆಧಾರ ಕಾರ್ಡ್, ನಿವಾಸ ಪ್ರಮಾಣ ಪತ್ರ, ರೇಷನ್ ಕಾರ್ಡ್, ಕರೆಂಟ್ ಬಿಲ್, ಬ್ಯಾಂಕ್ ಖಾತೆ ಪಾಸ್ಬುಕ್, ಮೊಬೈಲ್ ನಂಬರ್, ಪಾಸ್ಪೋರ್ಟ್ ಸೈಜ್ ಫೋಟೋ, ಆದಾಯ ದಾಖಲೆ ನೀಡಬೇಕು.