ಮತ್ತಿನಲ್ಲಿ ತೇಲಾಡುತ್ತಿದ್ದ ವಿದ್ಯಾರ್ಥಿನಿಯನ್ನು ಹೊತ್ತೊಯ್ದ ಸಹಪಾಠಿ; ಶಾಕಿಂಗ್ ವಿಡಿಯೋ ವೈರಲ್…..!

ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಘಟನೆಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಕೆಲ ದಿನಗಳ ಹಿಂದಷ್ಟೇ ಪುಡಿ ರೌಡಿಯೊಬ್ಬ ತನ್ನ ಗರ್ಲ್ ಫ್ರೆಂಡ್ ಜೊತೆ ಬೈಕಿನಲ್ಲಿ ಹೋಗುವಾಗ ಅಶ್ಲೀಲ ವರ್ತನೆ ತೋರಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದೀಗ ಮತ್ತೊಂದು ನಾಚಿಕೆಗೇಡಿ ವರ್ತನೆಯ ವಿಡಿಯೋ ವೈರಲ್ ಆಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸುತ್ತಿದ್ದಾರೆ. ಈ ವಿಡಿಯೋದಲ್ಲಿ ಶಾಲೆ ಅಥವಾ ಕಾಲೇಜು ವಿದ್ಯಾರ್ಥಿನಿಯಂತೆ ತೋರುವ ಒಬ್ಬಾಕೆ ಸಂಪೂರ್ಣ ಮತ್ತಿನಲ್ಲಿ ತೇಲಾಡುತ್ತಿದ್ದಾಳೆ. ಆಕೆಯನ್ನು ತಹಬದಿಗೆ ತರಲು ಸಹಪಾಠಿ ಯತ್ನಿಸುತ್ತಿದ್ದು ಆತ ಕೂಡ ಅಮಲಿನಲ್ಲಿದ್ದ.

ಹೇಗೋ ಆಕೆಯನ್ನು ಎತ್ತಿಕೊಳ್ಳಲು ಸಫಲವಾದ ಆತ ಜನನಿಬಿಡ ಪ್ರದೇಶದಿಂದ ಮತ್ತೊಂದು ಕಡೆ ಹೊತ್ತೊಯ್ಯಲು ಪ್ರಯತ್ನಿಸಿದ್ದು, ಸ್ವಲ್ಪ ದೂರ ಹೋಗುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ವಿದ್ಯಾರ್ಥಿನಿ ಸಮೇತ ಕೆಳಕ್ಕೆ ಬಿದ್ದಿದ್ದಾನೆ. ಈ ಘಟನೆ ನಾಗಪುರದ ಬಜಾಜ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಇಬ್ಬರು ಸಮೀಪದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಇದರ ಆಧಾರದ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read