alex Certify ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ: ಯುವತಿಯರಿಬ್ಬರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ: ಯುವತಿಯರಿಬ್ಬರು ಗಂಭೀರ

ಹಾಸನ: ಹಾಸನದಲ್ಲಿ ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ ಸಂಭವಿಸಿದೆ. ವೀಲ್ಹಿಂಗ್ ಮಾಡುವ ವೇಳೆ ಪುಂಡರ ಬೈಕ್ ಯುವತಿಯರಿಗೆ ಡಿಕ್ಕಿಯಾಗಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಭೂಮಿಕಾ ಮತ್ತು ಸಿಂಚನಾ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ಘಟನೆ ನಡೆದಿದೆ. ರಾತ್ರಿ ಫುಡ್ ಕೋರ್ಟ್ ನಲ್ಲಿ ಊಟ ಮಾಡಿಕೊಂಡು ಭೂಮಿಕಾ, ಸಿಂಚನಾ ಅವರು ದ್ವಿಚಕ್ರವಾಹನದಲ್ಲಿ ತೆರಳುವಾಗ ಜನನಿಬಿಡ ಪುಂಡರು ರಸ್ತೆಯಲ್ಲಿ ಜೋರಾಗಿ ವೀಲ್ಹಿಂಗ್ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ.

ವೀಲ್ಹಿಂಗ್ ಮಾಡಿದ ಶಾಕೀರ್ ಮತ್ತು ಅಪ್ರಾಪ್ತನನ್ನು ಹಿಡಿದು ಥಳಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಭೂಮಿಕಾ ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಾವು ಬದುಕಿನ ನಡುವೆ ಯುವತಿಯರು ಹೋರಾಟ ನಡೆಸುತ್ತಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ ನಗರದಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಹೆಚ್ಚಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...