ಬೆಂಗಳೂರು: ಅಪ್ರಾಪ್ತರು ವೀಲಿಂಗ್ ಮಾಡಿದರೆ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಿಸಲಾಗುತ್ತದೆ. ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿ ವೀಲಿಂಗ್ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸಂಚಾರ ವಿಭಾಗದ ಪೊಲೀಸರು ವೀಲಿಂಗ್ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರಿನ ಬಾಣಸವಾಡಿ, ಕೆಆರ್ ಪುರ, ಪುಲಿಕೇಶಿನಗರ, ಬ್ಯಾಟರಾಯನಪುರ ಮೊದಲಾದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಕೈಗೊಂಡು 8 ಮಂದಿಯನ್ನು ಬಂಧಿಸಲಾಗಿದ್ದು, 8 ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಲಾಗಿದೆ.
ವೀಲಿಂಗ್ ಮಾಡುವುದು ಕಂಡುಬಂದಲ್ಲಿ ವಾಹನ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರವಾಹನ ಚಾಲನೆ ಮಾಡಲು ಕೊಡುವ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.