
ಬೆಂಗಳೂರು: ನಗರದ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಆಟೋದಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಬಾಣಸವಾಡಿಯಲ್ಲಿ ಸ್ನೇಹಿತರೊಂದಿಗೆ ಆಟೋದಲ್ಲಿ ವ್ಹೀಲಿಂಗ್ ಮಾಡಲು ಮುಂದಾಗಿದ್ದು, ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಆಟೋ ಅಪಘಾತಕ್ಕೀಡಾಗಿದೆ. ಇದರಿಂದ ಕೆಳಗೆ ಬಿದ್ದ ಯುವಕನ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.