ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರದಂದು, ಗೋವಾದ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಅವರನ್ನು ತಮ್ಮ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ.
ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿಯು ಯೂಸ್ ಅಂಡ್ ಥ್ರೋ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರಿಗೆ ದುಃಖವಾಗಿದೆ. ನನಗೆ ಮನೋಹರ್ ಪರಿಕ್ಕರ್ ಅವರ ಮೇಲೆ ಯಾವಾಗಲೂ ಗೌರವವಿದೆ. ಉತ್ಪಾಲ್, ನಮ್ಮ ಪಕ್ಷದಿಂದ ಚುನಾವಣೆ ಎದುರಿಸಲು ನಿಮ್ಮನ್ನ ಸ್ವಾಗತಿಸುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಉತ್ಪಾಲ್ ಪರಿಕ್ಕರ್ ಅವರನ್ನು ಹೊರಗಿಟ್ಟ ನಂತರ ಕೇಜ್ರಿವಾಲ್ ಈ ರೀತಿಯ ಟ್ವೀಟ್ ಮಾಡಿದ್ದಾರೆ.
BIG NEWS: ಕರ್ಫ್ಯೂ ವಿಸ್ತರಣೆ ಬಗ್ಗೆ ಸಚಿವ ಡಾ. ಸುಧಾಕರ್ ಹೇಳಿದ್ದೀಗೆ….
ಮತ್ತೊಂದೆಡೆ ಬಿಜೆಪಿ ಇನ್ನೂ ಉತ್ಪಾಲ್ ಪರಿಕ್ಕರ್ ಅವರನ್ನು ಪಕ್ಷದ ಟಿಕೆಟ್ನಲ್ಲಿ ಸ್ಪರ್ಧಿಸುವಂತೆ ಮನವೊಲಿಸಲು ಪ್ರಯತ್ನಿಸುತ್ತಿದೆ. ಅವರ ಕುಟುಂಬದವರೊಂದಿಗೆ ಮಾತನಾಡುವ ಪ್ರಯತ್ನವೂ ನಡೆಯುತ್ತಿದೆ ಎಂದು ವರದಿಯಾಗಿದೆ. ಆದರೆ ಇತರ ನಾಯಕರು, ಬಿಚೋಲಿಮ್ ಕ್ಷೇತ್ರದಿಂದ ಪಕ್ಷದ ಹಿರಿಯ ನಾಯಕ ಮತ್ತು ವಿಧಾನಸಭಾ ಸ್ಪೀಕರ್ ರಾಜೇಶ್ ಪಟ್ನೇಕರ್ ಸ್ಪರ್ಧಿಸಲಿ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಟ್ನೇಕರ್ ಅವ್ರ ಮನವೊಲಿಸುವ ಪ್ರಯತ್ನಗಳು ಇನ್ನೂ ನಡೆಯುತ್ತಿವೆ. ಆದರೆ ಪಟ್ನೇಕರ್ ಅವರಿಗೆ ಆರೋಗ್ಯ ಸಮಸ್ಯೆಗಳಿದ್ದು ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಅಂಶಗಳಿಂದ ಉತ್ಪಾಲ್ ಪರಿಕ್ಕರ್ ಅವರಿಗೆ ಇನ್ನೂ ಟಿಕೆಟ್ ಖಚಿತವಾಗಿಲ್ಲ ಎಂದು ಹೇಳಲಾಗುತ್ತಿದೆ.
ಉತ್ಪಾಲ್ ಪರಿಕ್ಕರ್ ಅವರು ಈಗಾಗಲೇ ತಮ್ಮ ತಂದೆ ಈ ಹಿಂದೆ ಪ್ರತಿನಿಧಿಸುತ್ತಿದ್ದ, ಪಣಜಿ ಕ್ಷೇತ್ರದಲ್ಲಿ ಮನೆಮನೆಗೂ ತೆರಳಿ ಚುನಾವಣೆ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗ್ತಿದೆ. ಮನೋಹರ್ ಪರಿಕ್ಕರ್ ಅವರ ಸಾವಿನ ನಂತರ, ಉಪಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಸೋಲುಂಡಿತ್ತು. ಈಗಿನ ಬೆಳವಣಿಗೆಗಳನ್ನ ನೋಡುತ್ತಿದ್ದರೆ ಉತ್ಪಾಲ್ ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ.