
ಬೆಳಗಾವಿ: ನಾಳೆ ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.
ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರ ಪರವಾಗಿ ಮತ ಚಲಾಯಿಸಲು ವಿಪ್ ಜಾರಿ ಮಾಡಲಾಗಿದೆ. ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ನಾರಾಯಣಸ್ವಾಮಿ ಅವರು ವಿಪ್ ಜಾರಿ ಮಾಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನ ಪರಿಷತ್ ನಲ್ಲಿ ಹಾಜರಿರುವಂತೆ ಸದಸ್ಯರಿಗೆ ಸೂಚನೆ ನೀಡಲಾಗಿದೆ.