ಕೂದಲು ಬೆಳ್ಳಗಾಗುವ ಸಮಸ್ಯೆ ಇತ್ತೀಚೆಗೆ ಹಲವು ಜನರನ್ನು ಕಾಡುತ್ತಿದೆ. ವಯಸ್ಸಾದ ಮೇಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಿಮ್ಮ ಕೂದಲನ್ನು ಕಪ್ಪಾಗಿಸಲು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಜೊತೆ ಈ ಒಂದು ವಸ್ತುವನ್ನು ಸೇವಿಸಿ.
ನಿಮ್ಮ ಕೂದಲು ಕಪ್ಪಾಗಿ, ದಟ್ಟವಾಗಿರಲು ಪ್ರತಿದಿನ ಬೆಳಿಗ್ಗೆ ಬೆಲ್ಲ ಮತ್ತು ಮೆಂತ್ಯವನ್ನು ಸೇವಿಸಿ. ಇದು ಬಿಳಿಕೂದಲಿನ ಸಮಸ್ಯೆಗೆ ಉತ್ತಮ ಚಿಕಿತ್ಸೆಯಾಗಿದೆ. ಹಾಗೇ ಇದು ಕೂದಲುದುರುವ ಸಮಸ್ಯೆಯನ್ನು ನಿವಾರಿಸುತ್ತದೆ.
ಹಾಗೇ 2 ಚಮಚ ಮೆಂತ್ಯ ಬೀಜಗಳನ್ನು ನೀರಿನಲ್ಲಿ ಕುದಿಸಿ ನಂತರ ತಣ್ಣಗಾಗಿಸಿ, ಈ ನೀರಿನ್ನು ಕೂದಲಿಗೆ ಹಚ್ಚಿ 10 ನಿಮಿಷ ಬಿಟ್ಟು ಕೂದಲನ್ನು ತೊಳೆಯಿರಿ. ಇದರಿಂದ ಕೂದಲ ಬೆಳವಣಿಗೆ ಉತ್ತಮವಾಗಿರುತ್ತದೆ.
ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನಸಿ . ಬೆಳಿಗ್ಗೆ ಅದನ್ನು ರುಬ್ಬಿ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ. ಇದರಿಂದ ಕೂಡ ಕೂದಲು ಚೆನ್ನಾಗಿ ಬೆಳೆಯುತ್ತದೆ.
ಹಾಗೇ ಮೆಂತ್ಯ ಬೀಜಗಳನ್ನು ಪುಡಿ ಮಾಡಿ ತೆಂಗಿನೆಣ್ಣೆಯೊಂದಿಗೆ ಬೆರೆಸಿ ಕೂದಲಿನ ಮುಡಕ್ಕೆ ಹಚ್ಚಿ. ಇದರಿಂದ ತಲೆಹೊಟ್ಟಿನ ಸಮಸ್ಯೆ ದೂರವಾಗುತ್ತದೆ ಮತ್ತು ಕೂದಲುದುರುವುದು ನಿಂತು ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯುತ್ತದೆ.