alex Certify ಗಮನಿಸಿ : ‘ಯುವನಿಧಿ’ ಗೆ ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲಾ ದಾಖಲೆಗಳು ಬೇಕು? |Watch VIDEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಯುವನಿಧಿ’ ಗೆ ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲಾ ದಾಖಲೆಗಳು ಬೇಕು? |Watch VIDEO

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ನಿರುದ್ಯೋಗಿ ಯುವಜನರಿಗೆ ಮಾಸಿಕ ಧನಸಹಾಯ ನೀಡಿ, ಅವರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸುವ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಚಾಲನೆಯಲ್ಲಿದೆ. ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಯಾವೆಲ್ಲ ದಾಖಲೆಗಳು ಬೇಕು? ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಎಲ್ಲಾ ಮಾಹಿತಿ ತಿಳಿಯಲು ತಪ್ಪದೇ ವೀಡಿಯೋ ನೋಡಿ.

ಅರ್ಜಿ ಸಲ್ಲಿಕೆಗೆ ಅರ್ಹತೆಗಳು

1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅಗತ್ಯವಾಗಿದೆ.
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬೇಕಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...