ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರೆ 11 ಮಂದಿಯನ್ನು ಹೊತ್ತು ಸಾಗುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್ನಲ್ಲಿ ದುರಂತಕ್ಕೀಡಾಗಿದೆ. ಈ ದುರಂತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ದುರಂತ ಅಂತ್ಯ ಕಂಡಿದ್ದಾರೆ ಎಂದು ಐಎಎಫ್ ಟ್ವೀಟ್ ಮಾಡಿದೆ.
ವೆಲ್ಲಿಂಗ್ಟನ್ನ ಡಿಫೆನ್ಸ್ ಸರ್ವೀಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿದ್ದ ವೇಳೆಯಲ್ಲಿ ಹೆಲಿಕಾಪ್ಟರ್ ದುರಂತ ಅಂತ್ಯ ಕಂಡಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರತೀಯ ಸೇನೆಯ ಎಂಐ 15 ವಿ5 ಹೆಲಿಕಾಪ್ಟರ್ ತಮಿಳುನಾಡಿನ ಕುನೂರ್ ಬಳಿಯಲ್ಲಿ ದುರಂತಕ್ಕೀಡಾಗಿತ್ತು.
ಭಾರತೀಯ ವಾಯುಪಡೆ ನೀಡಿರುವ ಮಾಹಿತಿಯ ಪ್ರಕಾರ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಸ್ಸಿ, ಡಿಎಸ್ಎಸ್ಸಿಯ ಡೈರೆಕ್ಟಿಂಗ್ ಸಿಬ್ಬಂದಿ ಮಾತ್ರ ಈ ದುರಂತದಿಂದ ಬದುಕುಳಿದಿದ್ದಾರೆ.
ವರುಣ್ ಸಿಂಗ್ಗೆ ಗಂಭೀರ ಗಾಯಗಳಾಗಿದ್ದು ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ರಿಗೆ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ದಿನದಂದು ಕೇಂದ್ರ ಸರ್ಕಾರ ಶೌರ್ಯ ಚಕ್ರ ನೀಡಿ ಗೌರವಿಸಿದೆ.