ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಭಾರತೀಯ ಮೂಲದ ಕಮಲಾ ಹ್ಯಾರಿಸ್, ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ಹಾಲಿ ಅಧ್ಯಕ್ಷ ಜೋ ಬೈಡೆನ್ ಸ್ಪರ್ಧೆಯಿಂದ ಹಿಂದೆ ಸರಿದಿರುವ ಕಾರಣ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ.
ಒಂದೊಮ್ಮೆ ಕಮಲಾ ಹ್ಯಾರಿಸ್ ಅಧ್ಯಕ್ಷರಾಗಿ ಆಯ್ಕೆಯಾದರೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆಯಲಿದ್ದಾರೆ. ಕಮಲಾ ಹ್ಯಾರಿಸ್ ಪೂರ್ವಜರು ಮೂಲತಃ ತಮಿಳುನಾಡಿನ ತುಳಸೀಪುರಂ ಗ್ರಾಮದವರಾಗಿದ್ದು, ಬಳಿಕ ವಲಸೆ ಹೋಗಿದ್ದರು.
ಅಮೆರಿಕಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ತಮ್ಮ ತಾಯಿ ಶ್ಯಾಮಲಾ ಗೋಪಾಲನ್ ಅವರನ್ನು ಸ್ಮರಿಸಿಕೊಂಡಿದ್ದ ಕಮಲಾ ಹ್ಯಾರಿಸ್, ನನ್ನೆಲ್ಲ ಈ ಸಾಧನೆಗೆ ತಾಯಿಯೇ ಸ್ಪೂರ್ತಿ ಎಂದು ಹೇಳಿದ್ದರು. ಕಮಲಾ ಹ್ಯಾರಿಸ್ ಮುಂಬರುವ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿ ಎಂಬ ಮಾತು ಕೇಳಿ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯ ಸಮುದಾಯದಲ್ಲಿ ಸಂಭ್ರಮ ಮನೆ ಮಾಡಿದೆ.