ನವದೆಹಲಿ: ಬಿಜೆಪಿ ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ವಿಧಾನಸಭೆಯಲ್ಲಿ ಎರಡು ಬಾರಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಅವರು ಉದಾಮ್ ಸಿಂಗ್ ನಗರ ಜಿಲ್ಲೆಯ ಖತಿಮಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಇತರೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ಉತ್ತರಾಖಂಡ್ ಉಪಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ರಾತ್ರಿ ಸಿಎಂ ಸ್ಥಾನಕ್ಕೆ ತೀರತ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದರು. ಸಾಂವಿಧಾನಿಕ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು ನಾನು ರಾಜೀನಾಮೆ ನೀಡಿರುವುದಾಗಿ ತೀರತ್ ಸಿಂಗ್ ರಾವತ್ ಹೇಳಿದ್ದು, ತಮಗಾಗಿ ಅವಕಾಶ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದರು. ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ.