ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂಗರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿ ಎಲ್ ಬಿಗ್ ಶಾಕ್ ನೀಡಿದ್ದು ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿದೆ.
ಮೆಟ್ರೋ ಪ್ರಯಾಣ ಟಿಕೆಟ್ ದರ ಹೆಚ್ಚಳ ಮಾಡಿ ಬಿಎಂ ಆರ್ ಸಿ ಎಲ್ ಅಧಿಕೃತ ಆದೇಶ ಹೊರಡಿಸಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ.
ಬೆಂಗಳೂರು ನಗರದ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಯಾರು ಕಾರಣ? ಎಂಬ ಬಗ್ಗೆ ಪೂರ್ತಿ ಮಾಹಿತಿ ಈ ವಿಡಿಯೋದಲ್ಲಿದೆ. ಕೊನೆಯವರೆಗೂ ತಪ್ಪದೆ ನೋಡಿ ಎಂದು ಸರ್ಕಾರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದೆ.