ದಕ್ಷಿಣ ಆಫ್ರಿಕಾದ ರಿಯಾನ್ ರಿಕೆಲ್ಟನ್ ಅವರು ಕ್ವಿಂಟನ್ ಡಿ ಕಾಕ್ ಅವರ ಸ್ಥಾನಕ್ಕೆ ಸೂಕ್ತ ಉತ್ತರಾಧಿಕಾರಿ ಎಂದು ಸಾಬೀತುಪಡಿಸಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 107 ರನ್‌ಗಳ ಭರ್ಜರಿ ಜಯ ಸಾಧಿಸುವಲ್ಲಿ ರಿಕೆಲ್ಟನ್ ಅವರ ಶತಕ ಪ್ರಮುಖ ಪಾತ್ರ ವಹಿಸಿದೆ.
ರಿಕೆಲ್ಟನ್ ಅವರು ತಮ್ಮ ಆಟದ ಶೈಲಿಯನ್ನು ವಿವಿಧ ಸ್ವರೂಪಗಳಿಗೆ ಅಳವಡಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು 10 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದರು. ನಂತರ, 39 ಎಸೆತಗಳಲ್ಲಿ 89 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದ್ದರು. ಈಗ, ಅವರು ತಮ್ಮ ಮೊದಲ ಏಕದಿನ ಶತಕವನ್ನು ಗಳಿಸಿದ್ದಾರೆ.
ರಿಕೆಲ್ಟನ್ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಆಗಿ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆಯನ್ನು ಕೂಡಾ ಬರೆದಿದ್ದಾರೆ. ಎಬಿ ಡಿವಿಲಿಯರ್ಸ್ ಅವರು 2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ 70 ರನ್ ಗಳಿಸಿದ್ದರು.
ರಿಕೆಲ್ಟನ್, 2012 ರಲ್ಲಿ ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಂಡರ್-15 ವರ್ಷದ ಆಟಗಾರ ಪ್ರಶಸ್ತಿಯನ್ನು ಪಡೆದರು. 2014 ರ ಅಂಡರ್-19 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ವಿಫಲರಾದರಾದರೂ ವರ್ಷಗಳ ಕಠಿಣ ಪರಿಶ್ರಮದ ನಂತರ, ಅವರು 2022 ರಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.
View this post on Instagram