ಬೆಂಗಳೂರು : ಕರಿಮಣಿ ಮಾಲೀಕ ಯಾರು..? ಹೀಗೊಂದು ಚರ್ಚೆ ಸದನದಲ್ಲಿ ಆರ್ ಅಶೋಕ್-ಸಿಎಂ ಸಿದ್ದರಾಮಯ್ಯ ನಡುವೆ ಟಾಕ್ ಫೈಟ್ ಗೆ ಕಾರಣವಾಯಿತು.
ಸದನದಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಲೆಳೆದಿದ್ದ ಆರ್ ಅಶೋಕ್ ಮತ್ತು ಬಿಜೆಪಿ ಸದಸ್ಯ ಸುನೀಲ್ ಕರಿಮಣಿ ಮಾಲೀಕ ಯಾರು..? ಎಂದು ಪ್ರಶ್ನೆ ಎತ್ತಿದ್ದರು. ಈ ವಿಚಾರ ಸದನದಲ್ಲಿ ಟಾಕ್ ಫೈಟ್ ಗೆ ಕಾರಣವಾಯಿತು.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ “ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು” ಸದನದಲ್ಲಿ ಮಾತನಾಡಿದರೆ ಜನರ ಅಭಿರುಚಿಯನ್ನು ಹೆಚ್ಚಿಸಬೇಕು. ವಿದ್ಯಾವಂತರು ಸದನಕ್ಕೆ ಬರುತ್ತಿರುವುದರಿಂದ ಚರ್ಚೆ ಅರ್ಥಪೂರ್ಣ, ಆರೋಗ್ಯಕರವಾಗಿರಬೇಕು. ಜನರೂ, ಸಧನವೂ ಇದನ್ನೇ ನಿರೀಕ್ಷಿಸುತ್ತದೆ. ಅಶೋಕ್ ಹಾಗು ಸುನೀಲ್ ಕುಮಾರ್ ಅವರು ಮಾತನಾಡುವಾಗ ಕರಿಮಣಿ ಮಾಲೀಕ ಯಾರು ಎಂದು ಪ್ರಶ್ನಿಸಿದ್ದಾರೆ. ನನ್ನ ಹಾಗೂ ಬಹುತೇಕ ಸದಸ್ಯರ ಪ್ರಕಾರ ಅರ್ಥಹೀನ ಮಾತುಗಳು. ನನಗೂ ಹಿರಿಯ ಸದಸ್ಯರಿಂದ ಇಂಥ ಮಾತುಗಳ ನಿರೀಕ್ಷೆ ಇರಲಿಲ್ಲ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಜನರ ಆಶೀರ್ವಾದದಿಂದ 2023 ಮೇ 22 ರಂದು ಅಧಿಕಾರಕ್ಕೆ ಬಂದಿತು. ನಮ್ಮ ಪಕ್ಷ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು 2 ವರ್ಷಗಾಳಾಗುತ್ತಿವೆ. ಇದು ಸರ್ಕಾರ ಬಂದ ನಂತರ ರಾಜ್ಯಪಾಲರ ಎರಡನೇ ಭಾಷಣ. ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ “ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು” ಸದನದಲ್ಲಿ ಮಾತನಾಡಿದರೆ ಜನರ ಅಭಿರುಚಿಯನ್ನು ಹೆಚ್ಚಿಸಬೇಕು.
ವಿದ್ಯಾವಂತರು ಸದನಕ್ಕೆ ಬರುತ್ತಿರುವುದರಿಂದ ಚರ್ಚೆ ಅರ್ಥಪೂರ್ಣ, ಆರೋಗ್ಯಕರವಾಗಿರಬೇಕು. ಜನರೂ, ಸಧನವೂ ಇದನ್ನೇ ನಿರೀಕ್ಷಿಸುತ್ತದೆ.
ಅಶೋಕ್ ಹಾಗು… pic.twitter.com/LfoPh7iBrL
— Karnataka Congress (@INCKarnataka) March 17, 2025