ಬೆಂಗಳೂರು : ಯಾರು ಹೆಚ್ಚು ಹಣ ನೀಡ್ತಾರೋ, ಅವರು ಮಂತ್ರಿಯಾಗಿ ಇರ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ H.D ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ ಎಂದರು.
ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ 10 ಲಕ್ಷ ಮಹಿಳೆಯರಿಗೆ ಸಿಕ್ಕಿಲ್ಲ. ರಾಜ್ಯದಲ್ಲೇ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ಸಿಎಂ ಡಿಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ನೀಡಿದೆ. ಹೆಚ್ಚು ಹಣ ನೀಡುವವರು ಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಹಣ ನೀಡದವರು ಯಾರು ಮಂತ್ರಿಗಳು ಆಗಲ್ಲ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಕರ್ನಾಟಕಕ್ಕೆ ಕತ್ತಲೆ ಭಾಗ್ಯ ನೀಡಿದ್ದಾರೆ. ಲೋಡ್ ಶೆಡ್ಡಿಂಗ್ ನಿಂದ ರಾಜ್ಯದಲ್ಲಿ ಕತ್ತಲು ಆವರಿಸಿದೆ. ಮಹದೇವಪ್ಪಗೂ ಕತ್ತಲು ಕಾಕಾ ಪಾಟೀಲ್ ಕತ್ತಲು ಎನ್ನುವಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗೃಹ ಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ನೀಡುತ್ತೇವೆ ಎಂದಿದ್ದರು. ಆದರೆ ಗ್ರಾಹಕರ ಮನೆಗೆ ಹೆಚ್ಚುವರಿ ಕರೆಂಟ್ ಬಿಲ್ಬರುತ್ತಿದೆ . ರೈತರ ಪಂಪ್ ಸೆಟ್ ಗಳಿಗೆ 7 ತಾಸು ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಘೋಷಿಸಿದ್ದಾರೆ. ರಾಜ್ಯದಲ್ಲಿ ಎಲ್ಲಿ ಏಳು ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ ಎಂದು ಕಿಡಿಕಾರಿದರು.
ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು.