ಬೆಂಗಳೂರು : ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು, ಕೃಷಿಕ ಎಂದೇಳಲು ನಾಚಿಕೆ ಏಕೆ ಎಂದು ಅರ್ಜಿದಾರರಿಗೆ ಹೈಕೋರ್ಟ್ ಪ್ರಶ್ನಿಸಿದೆ.
ಪ್ರಕರಣವೊಂದರ ವಿಚಾರಣೆ ನಡೆಸುವಾಗ ಹೈಕೋರ್ಟ್ ಹೀಗೆ ಹೇಳಿದೆ. ಕೃಷಿ ಉದ್ಯೋಗದ ಬಗ್ಗೆ ನಮಗೆ ಹೆಮ್ಮೆ ಇರಬೇಕು, ಕೃಷಿಕ ಎಂದು ಹೇಳಲು ನಾಚಿಕೆ ಯಾಕೆ.. ? ಇದಕ್ಕೆಲ್ಲಾ ನಾಚಿಕೆ ಪಡಬಾರದು. ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬಾದ ಕೌಕ್ರಾಡಿ ಗ್ರಾಮದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿದೆ.
ವಾದ ವಿವಾದ ಆಲಿಸಿದ ನ್ಯಾಯಮೂರ್ತಿಗಳು ಅರ್ಜಿದಾರರಿಗೆ ನೀವೇನು ಕೆಲಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು ಸಣ್ಣ ಧ್ವನಿಯಲ್ಲಿ ಕೃಷಿಕ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋರ್ಟ್ ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು, ಕೃಷಿಕ ಎಂದೇಳಲು ನಾಚಿಕೆ ಏಕೆ ಎಂದು ಅರ್ಜಿದಾರರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಕೃಷಿ ಉದ್ಯೋಗದ ಬಗ್ಗೆ ನಮಗೆ ಹೆಮ್ಮೆ ಇರಬೇಕು, ಕೃಷಿಕ ಎಂದು ಹೇಳಲು ನಾಚಿಕೆ ಯಾಕೆ.. ? ಇದಕ್ಕೆಲ್ಲಾ ನಾಚಿಕೆ ಪಡಬಾರದು. ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದಿದೆ.