ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು ಬಿರುಸಿನ ಪ್ರಚಾರ ನಡೆಯುತ್ತಿದೆ. ಅಭ್ಯರ್ಥಿಗಳು ಗೆಲುವಿಗಾಗಿ ರೋಡ್ ಶೋ ಜೊತೆಗೆ ಟೆಂಪಲ್ ರನ್ ಮಾಡ್ತಿದ್ದಾರೆ.
ತಮ್ಮ ಗೆಲವಿಗಾಗಿ ಅಭ್ಯರ್ಥಿಗಳಷ್ಟೇ ಅಲ್ಲದೇ ಅವರ ಅಭಿಮಾನಿಗಳು ಸಹ ವಿಭಿನ್ನ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಕಟ್ಟಾ ಹಿತೈಷಿಗಳಲ್ಲೊಬ್ಬರಾದ ಹನುಮಂತಪ್ಪ ಜತ್ತಿ ಸಿದ್ದರಾಮಯ್ಯನವರ ಗೆಲುವಿಗಾಗಿ ಪಾದಯಾತ್ರೆ ಮಾಡಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನಿವಾಸಿ ಹನುಮಂತಪ್ಪ ಜತ್ತಿ ಅವರು ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿಯಾಗಿದ್ದು, ಮುಂಬರುವ ಚುನಾವಣೆಯ ನಂತರ ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಆಸೆ ಹೊಂದಿದ್ದಾರೆ.
ಹನುಮಂತಪ್ಪ ಪ್ರಾರ್ಥನೆ ಸಲ್ಲಿಸಿ ತಮ್ಮ ಆಸೆ ಈಡೇರುವಂತಾಗಲು ಗ್ರಾಮದ ವೀರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ಕ್ವಿಂಟಾಲ್ ತೂಕದ ಅಕ್ಕಿ ಮೂಟೆಯನ್ನು ಬೆನ್ನ ಮೇಲೆ ಹೊತ್ತು ಪಾದಯಾತ್ರೆ ಮಾಡಿದ್ದಾರೆ.