ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ರಿಯಾಯಿತಿಗಳನ್ನು ಘೋಷಿಸುತ್ತಿದ್ದರೆ, ಇದಕ್ಕೆ ವ್ಯತಿರಿಕ್ತವಾಗಿ ದೇಶವೊಂದು ಎಲೆಕ್ಟ್ರಿಕ್ ವಾಹನಗಳ ಸಂಚಾರ ನಿಷೇಧಕ್ಕೆ ಮುಂದಾಗಿದೆ ಎಂದರೆ ನೀವು ನಂಬಲೇಬೇಕು.
ಹೌದು, ಯುರೋಪಿನ ಪ್ರಮುಖ ದೇಶಗಳಲ್ಲಿ ಒಂದಾದ ಸ್ವಿಜರ್ಲ್ಯಾಂಡ್ ಎಲೆಕ್ಟ್ರಿಕ್ ವಾಹನಗಳ ನಿಷೇಧಕ್ಕೆ ಮುಂದಾಗಿದ್ದು, ಚಳಿಗಾಲದಲ್ಲಿ ವಿದ್ಯುತ್ ಕೊರತೆ ತಪ್ಪಿಸುವ ಸಲುವಾಗಿ ಇಂತಹದೊಂದು ತೀರ್ಮಾನಕ್ಕೆ ಗಂಭೀರ ಚಿಂತನೆ ನಡೆಸಿದೆ.
ಚಳಿಗಾಲದಲ್ಲಿ ಸ್ವಿಜರ್ಲ್ಯಾಂಡ್ ತೀವ್ರ ವಿದ್ಯುತ್ ಕೊರತೆಯನ್ನು ಎದುರಿಸಲಿದ್ದು, ಇದನ್ನು ನೀಗಿಸುವ ಸಲುವಾಗಿ ನೆರೆ ರಾಷ್ಟ್ರಗಳಿಂದ ವಿದ್ಯುತ್ ಪಡೆದುಕೊಳ್ಳಲಾಗುತ್ತಿತ್ತು. ಆದರೆ ರಷ್ಯಾ – ಉಕ್ರೇನ್ ಯುದ್ಧದ ಪರಿಣಾಮ ಇದು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ನಿಷೇಧಕ್ಕೆ ಸ್ವಿಜರ್ಲ್ಯಾಂಡ್ ಮುಂದಾಗಿದೆ ಎಂದು ಹೇಳಲಾಗಿದೆ.